Thursday, May 9, 2024

ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನು


ಯಾವ ಮೋಹನ ಮುರಳಿ ಕರೆಯಿತು

 Dr Gopalakrishna Adiga.


ಯಾವ ಮೋಹನ ಮುರಳಿ ಕರೆಯಿತು

ದೂರ ತೀರಕೆ ನಿನ್ನನು

ಯಾವ ಬೃಂದಾವನವು ಸೆಳೆಯಿತು
ನಿನ್ನ ಮಣ್ಣಿನ ಕಣ್ಣನು

ಹೂವು ಹಾಸಿಗೆ ಚಂದ್ರ ಚಂದನ
ಬಾಹು ಬಂಧನ ಚುಂಬನ
ಬಯಕೆ ತೋಟದ ಬೇಲಿಯೊಳಗೆ
ಕರಣ ಗಣದೀ ರಿಂಗನ

ಸಪ್ತ ಸಾಗರದಾಚೆ ಎಲ್ಲೊ
ಸುಪ್ತ ಸಾಗರ ಕಾದಿದೆ
ಮೊಳೆಯ ದಲೆಗಳ ಮೂಕ ಮರ್ಮರ
ಇಂದು ಇಲ್ಲಿಗೂ ಹಾಯಿತೆ?

ವಿವಶವಾಯಿತು ಪ್ರಾಣ - ಹಾ!!
ಪರವಶವು ನಿನ್ನೀ ಚೇತನ
ಇರುವುದೆಲ್ಲವ ಬಿಟ್ಟು
ಇರದುದರೆಡೆಗೆ ತುಡಿವುದೇ ಜೀವನ

ಯಾವ ಮೋಹನ ಮುರಳಿ ಕರೆಯಿತು
ಇದ್ದಕಿದ್ದಲೇ ನಿನ್ನನು
ಯಾವ ಬೃಂದಾವನವು ಚಾಚಿತು
ತನ್ನ ಮಿಂಚಿನ ಕಯ್ಯನು

ಯಾವ ಮೋಹನ ಮುರಳಿ ಕರೆಯಿತು
ದೂರ ತೀರಕೆ ನಿನ್ನನು

ದೀಪವು ನಿನ್ನದೆ ಗಾಳಿಯು ನಿನ್ನದೆ ಆರದಿರಲಿ ಬೆಳಕು


ದೀಪವು ನಿನ್ನದೆ ಗಾಳಿಯು ನಿನ್ನದೆ ಆರದಿರಲಿ ಬೆಳಕು


ದೀಪವು ನಿನ್ನದೆ ಗಾಳಿಯು ನಿನ್ನದೆ ಆರದಿರಲಿ ಬೆಳಕು

ಕಡಲು ನಿನ್ನದೆ ಹಡಗು ನಿನ್ನದೆ, ಮುಳುಗದಿರಲಿ ಬದುಕು

ಬೆಟ್ಟವು ನಿನ್ನದೆ, ಬಯಲು ನಿನ್ನದೆ, ಹಬ್ಬಿ ನಗಲಿ ಪ್ರೀತಿ
ನೆಳಲೋ ಬಿಸಿಲೋ ಎಲ್ಲವೂ ನಿನ್ನದೆ ಇರಲಿ ಏಕರೀತಿ

ಆಗೂಂದು ಸಿಡಿಲು, ಈಗೊಂದು ಮುಗಿಲು ನಿನಗೆ ಅಲಂಕಾರ
ಅಲ್ಲೊಂದು ಹಕ್ಕಿ, ಇಲ್ಲೊಂದು ಮುಗುಳು, ನಿನಗೆ ನಮಸ್ಕಾರ

ಅಲ್ಲಿ ರಣದುಂದುಭಿ, ಇಲ್ಲೊಂದು ವೀಣೆ, ನಿನ್ನ ಪ್ರತಿಧ್ವನಿ
ಆ ಮಹಾಕಾವ್ಯ, ಈ ಭಾವಗೀತೆ ನಿನ್ನ ಪದಧ್ವನಿ

By K.S.Narasimhaswamy

ಹಕ್ಕಿಯ ಹಾಡಿಗೆ ತಲೆದೂಗುವ ಹೂ ನಾನಾಗುವ ಆಸೆ.


ಹಕ್ಕಿಯ ಹಾಡಿಗೆ ತಲೆದೂಗುವ ಹೂ ನಾನಾಗುವ ಆಸೆ.

-- ಕೆ.ಎಸ್. ನರಸಿಂಹಸ್ವಾಮಿ

ಹಕ್ಕಿಯ ಹಾಡಿಗೆ ತಲೆದೂಗುವ ಹೂ ನಾನಾಗುವ ಆಸೆ.
ಹಸುವಿನ ಕೊರಳಿನ ಗೆಜ್ಜೆಯ ದನಿಯು ನಾನಾಗುವ ಆಸೆ.

ಹಬ್ಬಿದ ಕಾಮನ ಬಿಲ್ಲಿನ ಮೇಲಿನ ಮುಗಿಲಾಗುವ ಆಸೆ.
ಚಿನ್ನದ ಬಣ್ಣದ ಜಿಂಕೆಯ ಕಣ್ಣಿನ ಮಿಂಚಾಗುವ ಆಸೆ.

ತೋಟದ ಕಂಪಿನ ಉಸಿರಲಿ ತೇಲುವ ಜೇನಾಗುವ ಆಸೆ.
ಕಡಲಿನ ನೀಲಿಯ ನೀರಲಿ ಬಳುಕುವ ಮೀನಾಗುವ ಆಸೆ.

ಸಿಡಿಲನು ಕಾರುವ ಬಿರುಮಳೆಗಂಜದೆ ಮುನ್ನಡೆಯುವ ಆಸೆ.
ನಾಳೆಯ ಬದುಕಿನ ಇರುಳಿನ ತಿರುವಿಗೆ ದೀಪವನಿಡುವಾಸೆ.

ಮಣ್ಣಿನ ಕೊಡುಗೆಗೆ ನೋವಿಗೆ ನಲಿವಿಗೆ ಕನ್ನಡಿ ಹಿಡಿವಾಸೆ.
ಮಾನವ ಹೃದಯದ ಕರುಣೆಗೆ ಒಲವಿಗೆ ದನಿಗೂಡಿಸುವಾಸೆ.

ಓ ನನ್ನ ಚೇತನ


ಓ ನನ್ನ ಚೇತನ, ಆಗು ನೀ ಅನಿಕೇತನ

KUVEMPU 

ಓ ನನ್ನ ಚೇತನ, ಆಗು ನೀ ಅನಿಕೇತನ
ರೂಪರೂಪಗಳನು ದಾಟಿ, ನಾಮಕೋಟಿಗಳನು ಮೀಟಿ,
ಎದೆಯ ಬಿರಿಯ ಭಾವದೀಟಿ‌,
ಓ ನನ್ನ ಚೇತನ, ಆಗು ನೀ ಅನಿಕೇತನ

ನೂರು ಮತದ ಹೊಟ್ಟ ತೂರಿ, ಎಲ್ಲ ತತ್ವವೆಲ್ಲ ಮೀರಿ,

ನಿರ್ದಿಗಂತವಾಗಿ ಏರಿ,
ಓ ನನ್ನ ಚೇತನ, ಆಗು ನೀ ಅನಿಕೇತನ

ಎಲ್ಲಿಯೂ ನಿಲ್ಲದಿರು, ಮನೆಯನೆಂದೂ ಕಟ್ಟದಿರು,
ಕೊನೆಯನೆಂದು ಮುಟ್ಟದಿರು,
ಓ ಅನಂತವಾಗಿರು,
ಓ ನನ್ನ ಚೇತನ, ಆಗು ನೀ ಅನಿಕೇತನ

ಅನಂತ ತಾನ್ ಅನಂತವಾಗಿ, ಆಗುತಿಹನೆ ನಿತ್ಯಯೋಗಿ,
ಅನಂತ ನೀ ಅನಂತವಾಗು, ಆಗು ಆಗು ಆಗು,
ಓ ನನ್ನ ಚೇತನ, ಆಗು ನೀ ಅನಿಕೇತ

ಜೋಗದ ಸಿರಿ ಬೆಳಕಿನಲ್ಲಿ


ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ

-- NISAR AHMED

ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ,
ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ,
ನಿತ್ಯ ಹರಿದ್ವರ್ಣವನದ ತೇಗ ಗಂಧ ತರುಗಳಲ್ಲಿ
ನಿತ್ಯೋತ್ಸವ, ತಾಯಿ, ನಿತ್ಯೋತ್ಸವ ನಿನಗೆ...

ಇತಿಹಾಸದ ಹಿಮದಲ್ಲಿನ ಸಿಂಹಾಸನ ಮಾಲೆಯಲ್ಲಿ,
ಗತ ಸಾಹಸ ಸಾರುತಿರುವ ಶಾಸನಗಳ ಸಾಲಿನಲ್ಲಿ,
ಓಲೆ ಗರಿಯ ಸಿರಿಗಳಲ್ಲಿ, ದೇಗುಲಗಳ ಭಿತ್ತಿಗಳಲಿ
ನಿತ್ಯೋತ್ಸವ ತಾಯಿ, ನಿತ್ಯೋತ್ಸವ ನಿನಗೆ....

ಹಲವೆನ್ನದ ಹಿರಿಮೆಯೆ, ಕುಲವೆನ್ನದ ಗರಿಮೆಯೆ,
ಸದ್ವಿಕಾಸಶೀಲ ನುಡಿಯ ಲೋಕಾವೃತ ಸೀಮೆಯೆ,
ಈ ವತ್ಸರ ನಿರ್ಮತ್ಸರ ಮನದುದಾರ ಮಹಿಮೆಯೆ
ನಿತ್ಯೋತ್ಸವ, ತಾಯಿ, ನಿತ್ಯೋತ್ಸವ ನಿನಗೆ

ಕುರುಡು ಕಾಂಚಾಣ ಕುಣಿಯುತ್ತಲಿತ್ತು!


ಕುರುಡು ಕಾಂಚಾಣ ಕುಣಿಯುತ್ತಲಿತ್ತು! 

- Da. Ra. Bendre

ಕುರುಡು ಕಾಂಚಾಣ ಕುಣಿಯುತ್ತಲಿತ್ತು

ಕಾಲಿಗೆ ಬಿದ್ದವರ ತುಳಿಯುತ್ತಲಿತ್ತೋ ||

ಕುರುಡು ಕಾಂಚಾಣ || ಪಲ್ಲವಿ ||


ಬಾಣಂತಿಯೆಲುಬ ಸಾ-

ಬಾಣದ ಬಿಳುಪಿನಾ

ಕಾಣದ ಕಿರುಗೆಜ್ಜಿ ಕಾಲಾಗ ಇತ್ತೋ;

ಸಣ್ಣ ಕಂದಮ್ಮಗಳ

ಕಣ್ಣೀನ ಕವಡೀಯ

ತಣ್ಣನ್ನ ಜೋಮಾಲೆ ಕೊರಳೊಳಗಿತ್ತೋ;

ಬಡವರ ಒಡಲಿನ

ಬಡಬಾsನಲದಲ್ಲಿ

ಸುಡು ಸುಡು ಪಂಜು ಕೈಯೊಳಗಿತ್ತೋ;

ಕಂಬನಿ ಕುಡಿಯುವ

ಹುಂಬ ಬಾಯಿಲೆ ಮೈ -

ದುಂಬಿಯಂತುಧೋ ಉಧೋ ಎನ್ನುತಲಿತ್ತೋ.

ಕೂಲಿ ಕುಂಬಳಿಯವರ

ಪಾಲಿನ ಮೈದೊಗಲ

ಧೂಳಿಯ ಭಂಡಾರ ಹಣೆಯಯೊಳಗಿತ್ತೋ;

ಗುಡಿಯೊಳಗೆ ಗಣಣ, ಮಾ -

ಹಡಿಯೊಳಗ ತನನ, ಅಂ -

ಗಡಿಯೊಳಗೆ ಝಣಣಣ ನುಡಿಗೊಡುತಿತ್ತೋ.

ಹ್ಯಾಂಗಾರೆ ಕುಣಿಕುಣಿದು

ಮಂಗಾಟ ನಡೆದಾಗ

ಅಂಗಾತ ಬಿತ್ತೋ, ಹೆಗಲಲಿ ಎತ್ತೋ.

ಕರುಣಾಳು ಬಾ ಬೆಳಕೆ ಮುಸುಕಿದೀ ಮಬ್ಬಿನಲಿ


ಕರುಣಾಳು ಬಾ ಬೆಳಕೆ ಮುಸುಕಿದೀ ಮಬ್ಬಿನಲಿ

ಕೈ ಹಿಡಿದು ನಡೆಸೆನ್ನನು
ಇರುಳು ಕತ್ತಲೆಯ ಗವಿ ಮನೆ ದೂರ ಕನಿಕರಿಸಿ
ಕೈ ಹಿಡಿದು ನಡೆಸೆನ್ನನು

ಹೇಳಿ ನನ್ನಡಿಯಿಡಿಸು ಬಲುದೂರ ನೋಟವನು!
ಕೇಳನೊಡನೆಯೆ ಸಾಕು ನನಗೊಂದು ಹೆಜ್ಜೆ! ಮುನ್ನ ಇಂತಿರದಾದೆ ನಿನ್ನ ಬೇಡದೆ ಹೋದೆ!
ಕೈ ಹಿಡಿದು ನಡೆಸೆನ್ನನು!

ಇಷ್ಟುದಿನ ಸಲಹಿರುವೆ ಈ ಮೂರ್ಖನನು ನೀನು!ಮುಂದೆಯೂ ಕೈ ಹಿಡಿದು ನಡೆಸದಿಹೆಯಾ!
ಕಷ್ಟದಡವಿಯ ಕಳೆದು ಬೆಟ್ಟ ಹೊಳೆಗಳ ಹಾದು
ಇರುಳನ್ನು ನೂಕದಿಹೆಯಾ?

ಬೆಳಗಾಗ ಹೊಳೆಯದೆಯೆ ಹಿಂದೊಮ್ಮೆ ನಾನೊಲಿದು
ಈ ನಡುವೆ ಕಳಕೊಂಡೆ ದಿವ್ಯ ಮುಖ ನಗುತ

- ಬಿ.ಎಂ. ಶ್ರೀಕಂಠಯ್ಯ

ಮೂಡಲ ಮನೆಯ...


ಮೂಡಲ ಮನೆಯ...

-ದ. ರಾ. ಬೇಂದ್ರೆ


ಮೂಡಲ ಮನೆಯ ಮುತ್ತಿನ ನೀರಿನ

ಎರಕಾವ ಹೊಯ್ದ, ನುಣ್ಣನೆ ಎರಕಾವ ಹೊಯ್ದ ||


ಬಾಗಿಲು ತೆರೆದು ಬೆಳಕು ಹರಿದು

ಜಗವೆಲ್ಲಾ ತೊಯ್ದ , ದೇವಾನು ಜಗವೆಲ್ಲಾ ತೊಯ್ದ


ಎಲೆಗಳ ಮೇಲೆ ಹೂಗಳ ಒಳಗೆ

ಅಮೃತದ ಬಿಂದು, ಕಂಡವು ಅಮೃತದ ಬಿಂದು


ಯಾರಿರಿಸಿಹರು ಮುಗಿಲಿನ ಮೇಲಿಂದ

ಇಲ್ಲಿಗೆ ಇದ ತಂದು, ಈಗ ಇಲ್ಲಿಗೆ ಇದ ತಂದು


ಗಿಡಗಂಟೆಗಳ ಕೊರಳೊಳಗಿಂದ ಹಕ್ಕಿಗಳ ಹಾಡು

ಹೊರಟಿತು, ಹಕ್ಕಿಗಳ ಹಾಡು


ಗಂಧರ್ವ ಸೀಮೆಯಾಯಿತು ಕಾಡಿನ ನಾಡು

ಕ್ಷಣದೊಳು, ಕಾಡಿನ ನಾಡು



ಎಲ್ಲೋ ಹುಡುಕಿದೆ ಇಲ್ಲದ ದೇವರ


ಎಲ್ಲೋ ಹುಡುಕಿದೆ ಇಲ್ಲದ ದೇವರ

- ಜಿ. ಎಸ್. ಶಿವರುದ್ರಪ್ಪ

ಎಲ್ಲೋ ಹುಡುಕಿದೆ ಇಲ್ಲದ ದೇವರ

ಕಲ್ಲು ಮಣ್ಣುಗಳ ಗುಡಿಯೊಳಗೆ
ಇಲ್ಲೇ ಇರುವ ಪ್ರೀತಿ ಸ್ನೇಹಗಳ
ಗುರುತಿಸದಾದೆನು ನಿಮ್ಮೊಳಗೆ ||

ಎಲ್ಲಿದೆ ನಂದನ, ಎಲ್ಲಿದೆ ಬಂಧನ
ಎಲ್ಲಾ ಇದೆ ಈ ನಮ್ಮೊಳಗೆ
ಒಳಗಿನ ತಿಳಿಯನು ಕಲಕದೆ ಇದ್ದರೆ
ಅಮೃತದ ಸವಿಯಿದೆ ನಾಲಿಗೆಗೆ ||

ಹತ್ತಿರವಿದ್ದೂ ದೂರ ನಿಲ್ಲುವೆವು
ನಮ್ಮ ಅಹಮ್ಮಿನ ಕೋಟೆಯಲಿ
ಎಷ್ಟು ಕಷ್ಟವೋ ಹೊಂದಿಕೆಯೆಂಬುದು
ನಾಲ್ಕುದಿನದ ಈ ಬದುಕಿನಲಿ ||


ನಮ್ಮ ಮನೆಯಲೊಂದು ಸಣ್ಣ ಪಾಪವಿರುವುದು

ನಮ್ಮ ಮನೆಯಲೊಂದು ಸಣ್ಣ ಪಾಪವಿರುವುದು ನಮ್ಮ ಮನೆಯಲೊಂದು ಸಣ್ಣ ಪಾಪವಿರುವುದು ಎತ್ತಿಕೊಳಲು ಹೋದರದಕೆ ಕೋಪ ಬರುವುದು ಕೋಪ ಬರಲು ಗಟ್ಟಿಯಾಗಿ ಕಿರಿಚಿಕೊಳುವುದು ಕಿರಿಚಿಕೊಂಡು...