Thursday, May 9, 2024

ಎಲ್ಲೋ ಹುಡುಕಿದೆ ಇಲ್ಲದ ದೇವರ


ಎಲ್ಲೋ ಹುಡುಕಿದೆ ಇಲ್ಲದ ದೇವರ

- ಜಿ. ಎಸ್. ಶಿವರುದ್ರಪ್ಪ

ಎಲ್ಲೋ ಹುಡುಕಿದೆ ಇಲ್ಲದ ದೇವರ

ಕಲ್ಲು ಮಣ್ಣುಗಳ ಗುಡಿಯೊಳಗೆ
ಇಲ್ಲೇ ಇರುವ ಪ್ರೀತಿ ಸ್ನೇಹಗಳ
ಗುರುತಿಸದಾದೆನು ನಿಮ್ಮೊಳಗೆ ||

ಎಲ್ಲಿದೆ ನಂದನ, ಎಲ್ಲಿದೆ ಬಂಧನ
ಎಲ್ಲಾ ಇದೆ ಈ ನಮ್ಮೊಳಗೆ
ಒಳಗಿನ ತಿಳಿಯನು ಕಲಕದೆ ಇದ್ದರೆ
ಅಮೃತದ ಸವಿಯಿದೆ ನಾಲಿಗೆಗೆ ||

ಹತ್ತಿರವಿದ್ದೂ ದೂರ ನಿಲ್ಲುವೆವು
ನಮ್ಮ ಅಹಮ್ಮಿನ ಕೋಟೆಯಲಿ
ಎಷ್ಟು ಕಷ್ಟವೋ ಹೊಂದಿಕೆಯೆಂಬುದು
ನಾಲ್ಕುದಿನದ ಈ ಬದುಕಿನಲಿ ||


No comments:

Post a Comment

ನಮ್ಮ ಮನೆಯಲೊಂದು ಸಣ್ಣ ಪಾಪವಿರುವುದು

ನಮ್ಮ ಮನೆಯಲೊಂದು ಸಣ್ಣ ಪಾಪವಿರುವುದು ನಮ್ಮ ಮನೆಯಲೊಂದು ಸಣ್ಣ ಪಾಪವಿರುವುದು ಎತ್ತಿಕೊಳಲು ಹೋದರದಕೆ ಕೋಪ ಬರುವುದು ಕೋಪ ಬರಲು ಗಟ್ಟಿಯಾಗಿ ಕಿರಿಚಿಕೊಳುವುದು ಕಿರಿಚಿಕೊಂಡು...